ವಿದ್ಯಾರ್ಥಿ ಸಂಘದ ಉದ್ಘಾಟನೆ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ 2017-18 ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 28-9-2017 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ರಾಮಚಂದ್ರ ಯಂ ಮಾತನಾಡಿ ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು. ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು ಹಾಗೂ ಓದುವಿಕೆಯಲ್ಲಿ ಹೆಚ್ಚು ತೊಡಗಿಸಿಕ್ಕೊಳ್ಳಬೇಕು ಎಂದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ.ಜಿ.ಕೃಷ್ಣಮೂರ್ತಿ ಬೋಧಿಸಿದರು.

DSC_0322

DSC_0300

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮೂರ್ಕಜೆ ಮೈತ್ರೇಯಿ ಗುರುಕುಲದ ಪ್ರಾಚಾರ್ಯರಾದ ಶ್ರೀ ಉಮೇಶ್ ಹೆಗ್ಡೆ ಮಾತನಾಡಿ, ಸಮಾಜಕ್ಕೆ ಸಹಕಾರಿಯಾಗುವಂತಹ ಶಿಕ್ಷಣವು, ವಿದ್ಯಾರ್ಥಿಗಳಿಗೆ ಸಿಗಬೇಕಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘವು ಹೆಜ್ಜೆ ಹಾಕಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ, ಶ್ರೀ ಕೃಷ್ಣಕುಮಾರ್ ಶೆಟ್ಟಿ ಅವರು ಮಾತನಾಡಿ ಜೀವನದಲ್ಲಿ ವಿದ್ಯಾರ್ಥಿಗಳು ಕಲಿಕೆಯ ಗುಣಮಟ್ಟವನ್ನು ಏರಿಸಿ ಏಕತೆಯಿಂದ ಒಗ್ಗೂಡಿಕೊಂಡು, ನಿರಂತರ ಪರಿಶ್ರಮ, ಸಾಧನೆಗಳನ್ನು ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.

ಅತಿಥಿಗಳಾಗಿ ಪುತ್ತೂರಿನ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಪ್ರಕಾಶ್ ಕಾಲೇಜಿನ ಸಂಚಾಲಕರಾದ ಶ್ರೀ ವಿಜಯನಾರಾಯಣ ಕೆ. ಎಂ., ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರಮೇಶ್ ಉಪ್ಪಂಗಳ, ಭೋದಕ ಮತ್ತು ಭೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ದಿನಾಚರಣೆಯಂದು ನಡೆಸಲಾದ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಯಂದು ನಡೆಸಿದ ಸ್ಫರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಪ್ರಾರ್ಥನೆಯನ್ನು ವಿದ್ಯಾರ್ಥಿನಿ ಕು. ಪ್ರೀತಿಲಕ್ಷ್ಮಿ, ಸ್ವಾಗತವನ್ನು ವಿದ್ಯಾರ್ಥಿ ಸಂಘದ ನಾಯಕ ಶ್ರೀ ಸಂತೋಷ್ ಕೆ. ಆರ್. ನೆರವೇರಿಸಿದರು ಕಾರ್ಯದರ್ಶಿಯಾದ ಶ್ರೀ ಉಮೇಶ್ ದೇವಾಡಿಗ ವಂದನಾರ್ಪಣೆಗೈದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಪ್ರಶಾಂತ್ ನಿರೂಪಿಸಿದರು. ತದನಂತರ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಪ್ರಾರಂಭಕ್ಕೆ ಮೊದಲು, ಕಾಲೇಜಿನ ಗ್ರಂಥಾಲಯದಲ್ಲಿ ಶಾರದಾ ಮತ್ತು ಆಯುಧ ಪೂಜೋತ್ಸವ ಆಚರಿಸಲಾಯಿತು.

Highslide for Wordpress Plugin