ಸ್ವಚ್ಛತಾ ದಿನಾಚರಣೆ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಇಕೋ ಕ್ಲಬ್ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಮತ್ತು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನು ಅಕ್ಟೋಬರ್ 2 ರಂದು ಆಚರಿಸಲಾಯಿತು.

ವಿವೇಕಾನಂದ ಕಾನೂನು ಕಾಲೇಜಿನ ಸಂಚಾಲಕರಾದ ಶ್ರೀ ವಿಜಯನಾರಾಯಣ. ಕೆ. ಎಂ. ಅವರು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಂತಾರಾಷ್ಟ್ರೀಯ ಅಹಿಂಸಾ ದಿನದ ಪ್ರಾಮುಖ್ಯತೆಯನ್ನು ಸಮಾಜಕ್ಕೆ ತಿಳಿಸಬೇಕೆಂದು ಕರೆಕೊಟ್ಟರು. ಕಾಲೇಜಿನ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಕಾಲೇಜಿನ ಭೋದಕ ಮತ್ತು ಭೋದಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಶುಭಹಾರೈಸಿದರು.

DSC00281

Highslide for Wordpress Plugin