ವಿವಿಧ ಘಟಕಗಳ ಉದ್ಘಾಟನೆ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಪ್ರಾತ್ಯಕ್ಷಿಕಾ (ಅಣಕು) ನ್ಯಾಯಾಲಯ ಮತ್ತು ಕಾನೂನು ನೆರವು ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು 16-10-2017 ರ ಸೋಮವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ಕಾನೂನು ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಮತ್ತು ವಕೀಲರಾದ ಶ್ರೀ ಮಂಜುನಾಥ್ ಎನ್. ಎಸ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ವಚ್ಛ ಮನಸ್ಸು, ಸ್ವಚ್ಛ ಹಸ್ತ ಮತ್ತು ಪ್ರಾಮಾಣಿಕ ಪ್ರಯತ್ನದಿಂದ ನಿಮಗೆ ನೀವೇ ಗುರುವಾಗಬಹುದು ಎಂದು ಹೇಳಿ ತಮ್ಮ ಜೀವನದ ಅನುಭವಗಳನ್ನು ಹಂಚಿಕೊಂಡರು.

20171016_101709

20171016_095626

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಅವರು ಅಧ್ಯಕ್ಷತೆಯನ್ನು ವಹಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾದ ಶ್ರೀ ಕುಮಾರ್. ಎಸ್. ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಜುಬೈದಾ ವಂದಿಸಿದರು. ವಿದ್ಯಾರ್ಥಿನಿ ಶ್ವೇತಾ ನಿರೂಪಿಸಿದರು.

ಕಾಲೇಜಿನ ಭೋದಕ ಮತ್ತು ಭೋದಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Highslide for Wordpress Plugin