ವಿಶೇಷ ಉಪನ್ಯಾಸ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ, ದಿನಾಂಕ 7-11-2017 ರಂದು ಮಾನವ ಹಕ್ಕುಗಳು ಎಂಬ ವಿಷಯದ ಕುರಿತಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ರಮೇಶ್. ಕೆ., ವಿದ್ಯಾರ್ಥಿಗಳು ಮಾನವ ಹಕ್ಕುಗಳಿಗೆ ಮಹತ್ವ ಕೊಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿ ಮಾನವ ಹಕ್ಕುಗಳು ಇತಿಹಾಸ – ಮತ್ತು ಪ್ರಸಕ್ತ ವಿದ್ಯಮಾನ ಕುರಿತು ಉಪನ್ಯಾಸ ನೀಡಿದರು. ವಿವೇಕಾನಂದ ಕಾನೂನು ಕಾಲೇಜಿನ ಪ್ರಾಶುಂಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಬೋಧಕ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

guest lecture

Highslide for Wordpress Plugin