ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ ಪುತ್ತೂರು ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯನ್ನು ದಿನಾಂಕ 9-11-2017 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಗೌರವಾನ್ವಿತ ಶ್ರೀ ಎಂ. ರಾಮಚಂದ್ರ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪುತ್ತೂರು ಇವರು ಉದ್ಘಾಟಿಸಿ, ಮಾತನಾಡಿ, 1987 ರಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಜಾರಿಗೆ ಬಂದ ನಂತರ ಜನರಲ್ಲಿ ಕಾನೂನಿನ ಅರಿವು ಹೆಚ್ಚಾಗಿದೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಜಾತಿ-ಧರ್ಮರಹಿತವಾಗಿ ಕಾನೂನಿನ ನೆರವು ಸಿಗುತ್ತದೆ ಎಂದು ತಿಳಿಸಿ ಶುಭಹಾರೈಸಿದರು.

CHE_3512

CHE_3496

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾಜಿ ಸದಸ್ಯರು ಮತ್ತು ವಕೀಲರಾದ ಶ್ರೀ ಮಂಜುನಾಥ್ ಎನ್. ಎಸ್. ರಾಷ್ಟ್ರೀಯ ಕಾನೂನು ಸೇವೆಗನ್ನು ತಿಳಿಸುತ್ತಾ, ಈ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಕಾನೂನು ಕಾಲೇಜಿನ ಸಂಚಾಲಕರು ಮತ್ತು ವಕೀಲರಾಧ ಶ್ರೀ ವಿಜಯನಾರಾಯಣ ಕೆ. ಎಂ. ಇವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಸಿ. ಕೆ. ಬಸವರಾಜ್, ಗೌರವಾನ್ವಿತ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಎ.ಸಿ.ಜೆ.ಎಂ ಹಾಗೂ ಅಧ್ಯಕ್ಷರು, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ಶ್ರೀ ಮಂಜುನಾಥ್, ಗೌರವಾನ್ವಿತ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಪುತ್ತೂರು, ಶ್ರೀ ಪ್ರಕಾಶ್. ಪಿ. ಎಂ., ಗೌರವಾನ್ವಿತ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಹಾಗೂ ಸದಸ್ಯ ಕಾರ್ಯದರ್ಶಿ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಪುತ್ತೂರು, ಶ್ರೀ ಕಿಶನ್ ಬಿ. ಮಡಲಗಿ, ಗೌರವಾನ್ವಿತ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಪುತ್ತೂರು, ಶ್ರೀ ಭಾಸ್ಕರ್ ಕೋಡಿಂಬಾಳ, ಆಧ್ಯಕ್ಷರು, ವಕೀಲರ ಸಂಘ ಪುತ್ತೂರು, ಶ್ರೀ ಉದಯಶಂಕರ ಶೆಟ್ಟಿ, ವಕೀಲರು ಮತ್ತು ಸದಸ್ಯರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ಶ್ರೀ ಕೃಷ್ಣಪ್ರಸಾದ್ ರೈ, ಕಾರ್ಯದರ್ಶಿ, ವಕೀಲರ ಸಂಘ ಪುತ್ತೂರು ಉಪಸ್ಥಿತರಿದ್ದರು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಶುಂಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಸ್ವಾಗತಿಸಿದರು. ವಿದ್ಯಾರ್ಥಿ ವಿಮಲೇಶ್ ವಂದಿಸಿದರು. ವಿದ್ಯಾರ್ಥಿನಿ ಸುಲತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು.

Highslide for Wordpress Plugin