ಕಾನೂನು ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ವತಿಯಿಂದ, ಸರಕಾರಿ ಪದವಿಪೂರ್ವ ಕಾಲೇಜು, ವಾಮದಪದವು, ಬಂಟ್ವಾಳ ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು, ದಿನಾಂಕ 14-11-2017 ರಂದು ನಡೆಯಿತು. ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಉಪನ್ಯಾಸಕಿಯಾದ ಕು. ಶಕ್ತಿತ್ರಯ ಇವರು ಕಾನೂನು ವಿದ್ಯಾಭ್ಯಾಸ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಕು. ಕಾವ್ಯಶ್ರಿ, ಮಾಹಿತಿ ಹಕ್ಕು ಅಧಿನಿಯಮ ಬಗ್ಗೆ ಮತ್ತು ಕು. ಚಿತ್ರಕಲ ಮೂಲಭೂತ ಕರ್ತವ್ಯದ ಕುರಿತು ಮತ್ತು ಶಿವಾನಿ ಗ್ರಾಹಿಕ ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಶುಂಪಾಲರು ಶ್ರೀ ಶ್ರೀಧರ ಎಚ್, ಜಿ ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

IMG-20171114-WA0003

Highslide for Wordpress Plugin