ಸಿದ್ಧಕಟ್ಟೆ : ಕಾನೂನು ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ವತಿಯಿಂದ, ಸರಕಾರಿ ಪದವಿಪೂರ್ವ ಕಾಲೇಜು, ಸಿದ್ಧಕಟ್ಟೆ, ಬಂಟ್ವಾಳ ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು, ದಿನಾಂಕ 15-11-2017 ರಂದು ನಡೆಯಿತು. ಪುತ್ತೂರಿನ ವಕೀಲರಾದ ಶ್ರೀ ಅರುಣಾ ಗಣಪತಿಯವರು ಸಂಪನ್ಮೂಲ ವ್ಯಕ್ತಿಯಾಗಿ, ಜನಸಾಮಾನ್ಯರಿಗಾಗಿ ಕಾನೂನು ಎಂಬ ವಿಷಯದ ಕುರಿತು ಮಾಹಿತಿ ನೀಡಿದರು.

IMG-20171116-WA0012

ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಉಪನ್ಯಾಸಕಿಯಾದ ಕು. ಶಕ್ತಿತ್ರಯ ಇವರು ಕಾನೂನು ವಿದ್ಯಾಭ್ಯಾಸ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಶಾಶ್ವತ್ ಮೂಲಭೂತ ಹಕ್ಕು ಮತ್ತು ಕರ್ತವ್ಯದ ಕುರಿತು ಮತ್ತು ಕು.ಶಿವಾನಿ ಗ್ರಾಹಕ ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಶ್ರೀ ಶ್ರೀನಿವಾಸ್ ನಾಯ್ಕ, ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Highslide for Wordpress Plugin