ಕಡಬ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ವತಿಯಿಂದ, ಸರಸ್ವತಿ ಪದವಿಪೂರ್ವ ಕಾಲೇಜು, ಕಡಬ, ಪುತ್ತೂರು ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು ದಿನಾಂಕ 22-11-2017  ರಂದು ನಡೆಯಿತು. ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಉಪನ್ಯಾಸಕರಾದ ಶ್ರೀ ರಾಜೇಂದ್ರ ಪ್ರಸಾದ್ ಇವರು ಕಾನೂನು ವ್ಯಾಸಂಗದ ಮಹತ್ವ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್. ಯು. ಮೂಲಭೂತ ಕರ್ತವ್ಯಗಳ ಬಗ್ಗೆ ಮತ್ತು ಶಾಶ್ವತ್ ಜನಸಾಮಾನ್ಯರಿಗಾಗಿ ಕಾನೂನು ಕುರಿತು ಮಾಹಿತಿ ನೀಡಿದರು. ಸರಸ್ವತಿ ಪದವಿಪೂರ್ವ ಕಾಲೇಜಿನ ಪ್ರಾಶುಂಪಾಲರಾದ ಶ್ರೀ ಮಹೇಶ್ ಹಾಗೂ ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

20171122_151530

Highslide for Wordpress Plugin