ಕಾನೂನು ಮಾಹಿತಿ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ವತಿಯಿಂದ, ಸರಕಾರಿ ಪದವಿಪೂರ್ವ ಕಾಲೇಜು, ಕಾಣಿಯೂರು, ಪುತ್ತೂರು ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು, ದಿನಾಂಕ 6-12-2017 ರಂದು ನಡೆಯಿತು. ಪುತ್ತೂರಿನ ವಕೀಲರಾದ ಶ್ರೀ ಸುಧೀರ್ ಕುಮಾರ್ ತೋಳ್ಪಡಿಯವರು ಸಂಪನ್ಮೂಲ ವ್ಯಕ್ತಿಯಾಗಿ ಜನಸಾಮಾನ್ಯರಿಗಾಗಿ ಕಾನೂನು ಎಂಬ ವಿಷಯದ ಕುರಿತು ಮಾಹಿತಿ ನೀಡಿದರು. ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ಉಪನ್ಯಾಸಕಿಯಾದ ಶ್ರೀಮತಿ ಅಕ್ಷತಾ ಎ.ಪಿ. ಇವರು ಕಾನೂನು ವಿದ್ಯಾಭ್ಯಾಸ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಮನೋಜ್ ಗ್ರಾಹಿಕ ಹಕ್ಕುಗಳ ಬಗ್ಗೆ ಮತ್ತು ಪ್ರಶಾಂತ್, ಪ್ರಥಮ ವರ್ತಮಾನ ವರದಿ ಕುರಿತು ಮಾಹಿತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

IMG_20171206_151613

Highslide for Wordpress Plugin