ಪ್ರತಿಭೆಗಳ ಬೆಳವಣಿಗೆಗೆ ವೇದಿಕೆಗಳ ಅವಶ್ಯಕತೆಯಿದೆ : ನಾ. ಕಾರಂತ ಪೆರಾಜೆ

ಪುತ್ತೂರು: ಇಂದಿನ ದಿನಗಳಲ್ಲಿ ಹೊಸ ಪ್ರತಿಭೆಗಳು ಹುಟ್ಟಿಕೊಳ್ಳುತ್ತಿದ್ದು, ಅವರಿಗೆ ವೇದಿಕೆಗಳನ್ನು ಒದಗಿಸಿಕೊಡುವ ಅನಿವಾರ್ಯತೆ ಇದೆ. ಆ ನಿಟ್ಟಿನಲ್ಲಿ ವಿವೇಕಾನಂದ ಕಾನೂನು ಕಾಲೇಜಿನ ಪ್ರತಿಭಾಂಗಣ ಕಾರ್ಯಕ್ರಮವು ಶ್ಲಾಘನೀಯ ಎಂದು ಅಂಕಣಕಾರರು ಮತ್ತು ಪುತ್ತೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಶ್ರೀ ನಾ. ಕಾರಂತ ಪೆರಾಜೆ ಅವರು ವಿವೇಕಾನಂದ ಕಾನೂನು ಕಾಲೇಜಿನಲ್ಲಿ ನಡೆದ ಪ್ರತಿಭಾಂಗಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಆಶಯ ವ್ಯಕ್ತಪಡಿಸಿದರು. ನಂತರ ಮಾತನಾಡಿ, ಬದುಕು ಕಲೆಯಿಂದ ವಿಮುಖವಾಗಬಾರದು. ಶಿಕ್ಷಣ ಮತ್ತು ಕಲೆಯಿಂದ ಬೌದ್ಧಿಕ ಸೂಕ್ಷ್ಮ ಮತ್ತು ಎಚ್ಚರಗಳನ್ನು ಕಲಿತು ನಮ್ಮ ಬದುಕಿನಲ್ಲಿ ರೂಢಿಸಿಕೊಳ್ಳಬೇಕೆಂದು ಕರೆ ಕೊಟ್ಟರು.

CHE_6173

IMG_7121

IMG_7096

IMG_7091

ದಿನಾಂಕ 9-12-2017 ರಂದು ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಪ್ರತಿಭಾಂಗಣ ಕಾರ್ಯಕ್ರಮವು ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಉದ್ಘಾಟನೆಯನ್ನು ನೆರವೇರಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಶ್ರೀ ವಿಜಯ ನಾರಾಯಣ ಕೆ. ಎಂ. ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀ ಹರೀಶ್ ಭಟ್ ವೇದಿಕೆಯಲ್ಲಿದ್ದರು.

ನಂತರ ಪದವಿಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗಾಗಿ ಭಾಷಣ, ಚರ್ಚಾಸ್ಪರ್ಧೆ, ಭಾವಗೀತೆ ಮತ್ತು ದೇಶಭಕ್ತಿಗೀತೆ ಸ್ಪರ್ಧೆಗಳು ನಡೆದವು. ನಂತರ ನೆರೆದವರಿಗಾಗಿ ಪ್ರಾತ್ಯಕ್ಷಿಕಾ ನ್ಯಾಯಾಲಯ ಜರುಗಿತು. ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿಗಳಾದ ಶ್ರೀ ಅರವಿಂದ ವಳಕಟ್ಟೆ ವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಕಾನೂನು ಕಾಲೇಜಿನ ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗ, ವಿವಿಧ ಕಾಲೇಜುಗಳ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿವಿಧ ಕಾಲೇಜುಗಳಿಂದ ಸುಮಾರು 50 ಸ್ಪರ್ಧಾಳುಗಳು ಭಾಗವಹಿಸಿದ್ದರು.

Highslide for Wordpress Plugin