ವಾರ್ಷಿಕ ಕ್ರೀಡಾಕೂಟ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ 2017-18 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ದಿನಾಂಕ 16-03-2018 ರಂದು ವಿವೇಕಾನಂದ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಮಂಜುನಾಥ್. ಎನ್. ಎಸ್. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಖಜಾಂಜಿ ಶ್ರೀ ಸುರೇಂದ್ರ ಕಿಣಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ರೀಡೆಯು ಸಹ ಶಿಕ್ಷಣದ ಒಂದು ಭಾಗವಿದ್ದಂತೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ ಎಂದು ಹೇಳಿದರು.

DSC_0018(6)

DSC_0038(6)

DSC_0095(2)

DSC_0108(1)

DSC_0081(4)

DSC_0083(3)

ಅಧ್ಯಕ್ಷತೆ ವಹಿಸಿದ್ದ ಶ್ರೀ ಮಂಜುನಾಥ್. ಎನ್. ಎಸ್. ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇಲ್ಲದಿದ್ದರೆ ಕೆಲವೊಂದು ಸ್ಮರಣೀಯ ಕ್ಷಣಗಳನ್ನು ನಾವು ಕಳೆದುಕೊಳ್ಳುತ್ತೇವೆ ಎಂದರು. ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಯತೀಶ್ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ವಿದ್ಯಾರ್ಥಿನಿ ಜುಬೈದಾ ಸ್ವಾಗತಿಸಿ, ವಿದ್ಯಾರ್ಥಿನಿ ಶ್ವೇತಾ ವಂದಿಸಿದರು. ಬೋಧಕ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಗಾಗಿ ಕ್ರೀಡಾಸ್ಪರ್ಧೆಗಳು ಜರಗಿದವು.

Highslide for Wordpress Plugin