ಹಿರಿಯ ನಾಗರಿಕರ ಹಕ್ಕುಗಳ ಸಂರಕ್ಷಣೆ ಕುರಿತು ಉಪನ್ಯಾಸ

ವಿವೇಕಾನಂದ ಕಾನೂನು ಕಾಲೇಜಿನ, ಮಾನವ ಹಕ್ಕುಗಳ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ, ದಿನಾಂಕ 4-4-2018 ಬುಧವಾರದಂದು, ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ, ಡಾ. ರವೀಂದ್ರನಾಥ್ ಶಾನುಭಾಗ್ ಇವರಿಂದ ಹಿರಿಯ ನಾಗರಿಕರ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ, ಎಲ್ಲಾ ವೃತ್ತಿಯಲ್ಲಿರುವವರು, ಅವರ ವೃತ್ತಿಗೆ ನ್ಯಾಯ ಕೊಡಿಸಬೇಕು. ಆಗ ಸಮಾಜದಲ್ಲಿ ಎಲ್ಲರಿಗೂ ನ್ಯಾಯ ಸಿಗುವಂತೆ ಆಗುತ್ತದೆ ಎಂದು ಅವರು ತಿಳಿಸಿ, ಕೆಲವೊಂದು ನಿದರ್ಶನಗಳನ್ನು ನೀಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ, ಶ್ರೀ ಕೆ.ಜಿ. ಕೃಷ್ಣಮೂರ್ತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕುಗಳ ಹೋರಾಟಗಾರ, ಶ್ರೀ ದಿನೇಶ್ ಭಟ್, ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿ ತೇಜಸ್ ಕಾರ್ಯಕ್ರಮ ನಿರೂಪಿಸಿದರು.

CHE_7363

CHE_7367

Highslide for Wordpress Plugin