ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಎನ್.ಎಸ್.ಎಸ್ ವಿಶೇಷ ಶಿಬಿರ ಉದ್ಘಾಟನೆ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಹುಬ್ಬಳ್ಳಿ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿ ದಿನಾಂಕ 3-5-2018 ರಂದು ನಡೆಯಿತು.

IMG_7467

IMG_7479

IMG_7499

ವಿವೇಕಾನಂದ ಮಹಾವಿದ್ಯಾಲಯದ, ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾದ ಡಾ. ರೋಹಿಣಾಕ್ಷ ಶಿರ್ಲಾಲು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು, ಯುವ ಜನತೆಗೆ ವೇದಿಕೆಯನ್ನು ನಿರ್ಮಿಸಿಕೊಡುತ್ತಿದೆ. ವಿದ್ಯಾರ್ಥಿಗಳು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ವಿವೇಕಾನಂದ ಕಾನೂನು ಕಾಲೇಜಿನ ಪ್ರಾಶುಂಪಾಲರಾದ, ಶ್ರೀ ಕೆ. ಜಿ. ಕೃಷ್ಣಮೂರ್ತಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ನಾಯಕತ್ವ ಗುಣಗಳನ್ನು ಕಲಿಸಿಕೊಡುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ, ಕುಮಾರ್. ಎಸ್ ಸ್ವಾಗತಿಸಿ, ಶಿಬಿರಾರ್ಥಿ ಶಾಂತಲಕ್ಷ್ಮಿ ವಂದಿಸಿದರು. ಕಾಲೇಜಿನ ಭೋಧಕ ಮತ್ತು ಬೋಧಕೇತರ ವರ್ಗದವರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Highslide for Wordpress Plugin