ವಿವೇಕಾನಂದ ಕಾನೂನು ಕಾಲೇಜಿಗೆ ’ಡೈರಕ್ಟರ್ ಆಫ್ ಲೀಗಲ್ ಸ್ಟಡೀಸ್’ ಆಗಿ ಡಾ. ರವೀಂದ್ರ ಬಿ. ಕೆ. ನೇಮಕ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ’ಡೈರಕ್ಟರ್ ಆಫ್ ಲೀಗಲ್ ಸ್ಟಡೀಸ್’ ಆಗಿ, ಡಾ. ರವೀಂದ್ರ ಬಿ. ಕೆ. ಇವರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಇವರ ಉಪಸ್ಥಿತಿಯಲ್ಲಿ ದಿನಾಂಕ 9-7-2018 ರಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಜೋಷಿ. ಬಿ., ಸಂಚಾಲಕರಾದ ವಿಜಯನಾರಾಯಣ ಕೆ. ಎಂ, ಖಜಾಂಚಿ ಅರವಿಂದ ವಳಕಟ್ಟೆ, ಸದಸ್ಯರಾದ ಕೆ. ಆರ್. ಆಚಾರ್ಯ, ರಮೇಶ್ ಉಪ್ಪಂಗಳ, ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

CHE_3987

ಡಾ. ರವೀಂದ್ರ ಬಿ.ಕೆ. ಇವರು ಬೆಂಗಳೂರಿನ ಆಲಯನ್ಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಡೀನ್ ಆಗಿ, ಮಂಗಳೂರಿನ ಎಸ್.ಡಿ.ಎಮ್ ಕಾನೂನು ಕಾಲೇಜಿನ ಪ್ರಾಂಶುಪಾಲರಾಗಿ, ಬೆಂಗಳೂರು ಆಕ್ಸ್‌ಫರ್‍ಡ್ ಕಾನೂನು ಕಾಲೇಜಿನ ನಿರ್ದೇಶಕರಾಗಿ, ಮಂಗಳೂರು ವಿಶ್ವವಿದ್ಯಾಲಯದ ಡೀನ್ ಆಗಿ ಕಾರ್ಯನಿರ್ವಹಿಸಿದ್ದರು. ಇವರು ತಮ್ಮ ಕಾನೂನು ವಿದ್ಯಾಭ್ಯಾಸ ಮತ್ತು ಡಾಕ್ಟರೇಟ್ ಪದವಿಯನ್ನು, ಮೈಸೂರು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿದ್ದಾರೆ.

Highslide for Wordpress Plugin