ಮೂಟ್ ಸೊಸೈಟಿ ಉದ್ಘಾಟನೆ

ವಿವೇಕಾನಂದ ಕಾನೂನು ಕಾಲೇಜಿನ ಮೂಟ್ ಸೊಸೈಟಿಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 3-9-2018 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಉಡುಪಿಯ ಸೀನಿಯರ್ ಲೀಗಲ್ ಎಕ್ಸ್ ಕ್ಯೂಟಿವ್ ಶ್ರೀ ಮನೀಶ್ ಕೆ. ಸಾಲಿಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಣಕು ನ್ಯಾಯಾಲಯದ ಮಹತ್ವ ಮತ್ತು ಉಪಯೋಗಗಳನ್ನು ತಿಳಿಸುತ್ತಾ, ತನ್ನ ವಿದ್ಯಾರ್ಥಿ ಜೀವನದ ನೆನಪುಗಳನ್ನು ಮೆಲುಕು ಹಾಕಿದರು.

Moot Society inauguration (2)

Moot Society inauguration (1)

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ವಕೀಲರಾದ ಶ್ರೀ ಸುಬ್ರಹ್ಮಣ್ಯ ಕೊಳತ್ತಾಯ ಮಾತನಾಡಿ, ವಕೀಲ ವೃತ್ತಿಯಲ್ಲಿ ಸಂವಹನ ಎಂಬುದು ಬಹುಮುಖ್ಯ ಕಾನೂನು ವಿದ್ಯಾರ್ಥಿಗಳು ಧೈರ್ಯದಿಂದ ಮಾತನಾಡಲು ಕಲಿಯಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾನೂನು ಕಾಲೇಜಿನ ಡೈರಕ್ಟರ್ ಆಫ್ ಲೀಗಲ್ ಡಾ. ಬಿ. ಕೆ. ರವೀಂದ್ರ ಅವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಜೇಂದ್ರ ಪ್ರಸಾದ್ ಎ., ಉಪನ್ಯಾಸಕಿ ಕುಮಾರಿ ಸುಭಾಷಿಣಿ ಜೆ., ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಮೂಟ್ ಸೊಸೈಟಿಯ ಕುರಿತು ಕಾರ್ಯಗಾರ ನಡೆಸಿದರು.

Highslide for Wordpress Plugin