ಸ್ವಚ್ಛತಾ ಕಾರ್ಯಕ್ರಮ

ವಿವೇಕಾನಂದ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ, ದಿನಾಂಕ 1-10-2018 ರಂದು ಸ್ವಚ್ಛತೆಯ ಕುರಿತು ಮಾಹಿತಿ ಮತ್ತು ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಮಾಹಿತಿ ಕಾರ್ಯಕ್ರಮದಲ್ಲಿ, ಕಾಲೇಜಿನ ಡೈರಕ್ಟರ್ ಆಫ್ ಲೀಗಲ್ ಸ್ಟಡೀಸ್ ಆದ, ಡಾ. ಬಿ. ಕೆ ರವೀಂದ್ರ ಅವರು ಮಾತನಾಡಿ, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಡುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಜೇಂದ್ರ ಪ್ರಸಾದ್ ಎ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀ ಕುಮಾರ್. ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಕಾಲೇಜಿನ ಸುತ್ತಮುತ್ತಲಿನ ಪರಿಸರದಲ್ಲಿ, ಕಸವನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು.

cleaning program (2)

cleaning program (3)

cleaning program (1)

Highslide for Wordpress Plugin