ವಿವೇಕಾನಂದ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ 2014-15 ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 20-9-2014 ರಂದು ಜರುಗಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ರಾಧಾಕೃಷ್ಣ ಕಲ್ಚಾರ್ (ನಿವೃತ್ತ ಉಪನ್ಯಾಸಕರು ಹಾಗೂ ಯಕ್ಷಗಾನ ರಂಗಕರ್ಮಿ) ಮಾತನಾಡಿ ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು. ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು ಸಾಧ್ಯ.ಕಣ್ಣ ಎದುರು ಗೋಚರಿಸುವ ಸಾಮಾಜಿಕ ಕ್ಷೀಣತೆಗೆ ತರುಣರು ಎಡೆ ಮಾಡಿಕೊಡುತ್ತಿದ್ದಾರೆ, ನಮ್ಮ ಹೆಮ್ಮೆಯ ಸಾಂಸ್ಕೃತಿಕ ಪರಂಪರೆಗಳಲ್ಲಿ ಒಂದಾದ ಯಕ್ಷಗಾನ ಕಲೆ, ಮುಂತಾದ ಜನಪದ ಕಲೆಗಳು, ಪಕ್ಕ ವಾದ್ಯಗಳು ಈಗ ನಶಿಸಿ ಹೋಗುವ ಅಂಚಿನಲ್ಲಿದೆ ಆದರೆ ಅರಿವಿರುವ ಸತ್ಪ್ರಜೆಗಳು ನಿರ್ಮಾಣವಾಗಿ ಎಚ್ಚೆತ್ತುಕೊಂಡರೆ ಮಾತ್ರ ನಮ್ಮ ಗ್ರಾಮೀಣ ಪುರಾತನ ಕಲೆಯು ಅಂಚಿನತ್ತ ಹೋಗುವುದರಿಂದ ತಪ್ಪಿಸಿ ದಾರಿಗೆ ತರಬಹುದಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಕೆ.ಆರ್. ಆಚಾರ್ಯ ಮಾತನಾಡಿ ಜೀವನದಲ್ಲಿ ವಿದ್ಯಾರ್ಥಿಗಳು ಕಲಿಕೆಯ ಗುಣಮಟ್ಟವನ್ನು ಏರಿಸಿ ಏಕತೆಯಿಂದ ಒಗ್ಗೂಡಿಕೊಂಡು, ನಿರಂತರ ಪರಿಶ್ರಮ, ಸಾಧನೆಗಳನ್ನು ಮಾಡಬೇಕಾದ ಅನಿವಾರ್ಯತೆ ಇದೆ ಎಂದರು. ಬಳಿಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ.ಜಿ.ಕೃಷ್ಣಮೂರ್ತಿ ಬೋಧಿಸಿದರು.

ಸ್ವಾತಂತ್ರ್ಯ ದಿನಾಚರಣೆಯಂದು ನಡೆಸಲಾದ, ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಯಂದು ನಡೆಸಿದ ಸ್ಫರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಪ್ರಾರ್ಥನೆಯನ್ನು ವಿದ್ಯಾರ್ಥಿನಿ ಸಂಗೀತಾ, ಸ್ವಾಗತವನ್ನು ವಿದ್ಯಾರ್ಥಿ ಸಂಘದ ನಾಯಕ ಶ್ರೀ ಸುರೇಶ್ ನೆರವೇರಿಸಿದರು. ಕಾರ್ಯದರ್ಶಿಯಾದ ಶ್ರೀ ತೀರ್ಥೇಶ್ ವಂದನಾರ್ಪಣೆಗೈದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ವೈಭವಿ ನಿರೂಪಿಸಿದರು. ತದನಂತರ ಪ್ರತಿಭಾ ಪ್ರದರ್ಶನ ನಡೆಯಿತು.

Highslide for Wordpress Plugin