Vivekananda Law College, Puttur, Dakshina Kannada

ಯುವಜನತೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು : ಸುಭಾಷ್ ಪಟ್ಟಾಜೆ

ಇಂದಿನ ದಿನಗಳಲ್ಲಿ ಯುವ ಜನತೆಯಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿದ್ದು, ರಾಷ್ಟ್ರೀಯ ಸೇವಾ ಯೋಜನೆಯ ಅದನ್ನು ನೆನಪಿಸಿಕೊಡುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಶಿಬಿರಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ಸುಭಾಷ್ ಪಟ್ಟಾಜೆ ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಹುಬ್ಬಳ್ಳಿ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ಮೊದಲನೆಯ ದಿನದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಕೀಲರು ಮತ್ತು ಕಾನೂನು ಕಾಲೇಜಿನ ಉಪನ್ಯಾಸಕರಾದ ಶ್ರೀ ಸುಧೀರ್ ತೋಳ್ಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಉಪಸ್ಥಿತರಿದ್ದರು. ಶಿಬಿರಾರ್ಥಿ ಗೌರೀಶ್ ಕಾರ್ಯಕ್ರಮ ನಿರ್ವಹಿಸಿದರು.

IMG_7575

IMG_7572

IMG_7573

Event Calendar

Mon
Tue
Wed
Thu
Fri
Sat
Sun
M
T
W
T
F
S
S
29
30
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
1
2
Highslide for Wordpress Plugin