Vivekananda Law College, Puttur, Dakshina Kannada

ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 24-09-2018 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಮುಂಡಾಜೆ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮತ್ತು ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀ ಪುರುಷೋತ್ತಮ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳನ್ನು ಸಮಾಜಮುಖಿಯನ್ನಾಗಿ ಮಾಡುತ್ತದೆ. ಇದು ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇಂತಹ ರಾಷ್ಟ್ರೀಯ ಸೇವಾ ಯೋಜನೆ ಇಂದು ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವುದು ಸಂತಸದ ವಿಚಾರ ಎಂದು ಹೇಳಿದರು.

NSS Inauguration (1)

NSS Inauguration (3)

NSS Inauguration (2)

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಜೇಂದ್ರ ಪ್ರಸಾದ್ ಎ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಕಾಲೇಜಿನ ಚಟುವಟಿಕೆಗಳಿಗೆ ಸೀಮಿತವಾಗದೇ ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅತಿಥಿಗಳನ್ನು ಪರಿಸರ ಸಂರಕ್ಷಣೆಯ ಸೂಚಕವಾಗಿ, ಹೂವಿನ ಗಿಡವನ್ನು ನೀಡಿ ಸ್ವಾಗತಿಸಲಾಯಿತು. ಕಾಲೇಜಿನ ಡೈರಕ್ಟರ್ ಆಫ್ ಲೀಗಲ್ ಸ್ಟಡೀಸ್ ಆದ ಡಾ. ಬಿ. ಕೆ ರವೀಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವೇಕಾನಂದ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕುಮಾರ್ ಎಸ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳಾನ್ನಾಡಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿ ನಾಯಕ ಶ್ರವಣ ಕುಮಾರ್ ವಂದಿಸಿದರು. ವಿದ್ಯಾರ್ಥಿನಿ ಅಕ್ಷಿತಾ ಜೆ. ಆರ್ ನಿರೂಪಿಸಿದರು.

Event Calendar

Mon
Tue
Wed
Thu
Fri
Sat
Sun
M
T
W
T
F
S
S
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
1
2
3
4
5
Highslide for Wordpress Plugin