Vivekananda Law College, Puttur, Dakshina Kannada

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ, ಹುಬ್ಬಳ್ಳಿ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಮತ್ತು ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮವು ತಾಲ್ಲೂಕು ಕಾನೂನು ಸೇವಾ ಸಮಿತಿ, ಪುತ್ತೂರು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗಳ ಸಹಯೋಗದಲ್ಲಿ ದಿನಾಂಕ 3-5-2018 ರಂದು ಬೆಳಿಗ್ಗೆ 10 ಗಂಟೆಗೆ, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು.

CHE_0807

CHE_0824

ಪುತ್ತೂರಿನ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಪ್ರಕಾಶ್ ಪಿ. ಯಂ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯು, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆಯನ್ನು ತುಂಬುತ್ತದೆ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರಿನ ಕಾರ್ಮಿಕ ಅಧಿಕಾರಿ, ಶ್ರೀ ರಾಮಚಂದ್ರ ಎಚ್ ಇವರು, ಕಾರ್ಮಿಕರ ವಿಮಾ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಿ. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಪೂರ್ಣಿಮಾ, ಕಾನೂನು ಕಾಲೆಜಿನ ಉಪನ್ಯಾಸಕರಾದ ಶ್ರೀ ಕಾರ್ತಿಕ್ ಆನಂದ್ ವೇದಿಕೆಯಲ್ಲಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಕುಮಾರ್ ಎಸ್. ಸ್ವಾಗತಿಸಿ, ಕಾನೂನು ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಸಂಗೀತಾ ವಂದಿಸಿದರು. ಶಿಬಿರಾರ್ಥಿ ಸುಲತಾ ನಿರೂಪಿಸಿದರು.

ಕಾಲೇಜಿನ ಭೋಧಕ ಮತ್ತು ಬೋಧಕೇತರ ವರ್ಗದವರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Event Calendar

Mon
Tue
Wed
Thu
Fri
Sat
Sun
M
T
W
T
F
S
S
29
30
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
1
2
Highslide for Wordpress Plugin