Vivekananda Law College, Puttur, Dakshina Kannada

ವಿದ್ಯಾರ್ಥಿ ಸಂಘದ ಉದ್ಘಾಟನೆ

ಕಾನೂನು ವ್ಯವಸ್ಥೆಯಲ್ಲಿ ಒಂದಿಷ್ಟು ಬದಲಾವಣೆಯ ಅವಶ್ಯಕತೆಯಿದ್ದು, ಕಾನೂನು ವಿದ್ಯಾರ್ಥಿಗಳು ಆ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ ಕೃಷ್ಣ ಭಟ್ ಹೇಳಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ದಿನಾಂಕ 1-9-2018 ರಂದು ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ನೆನಪಿಸಿದರು.

CHE_5579

CHE_5607

ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ಶಿವಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಶಿಕ್ಷಣದಲ್ಲಿ ಇಂಗ್ಲಿಷ್­ನ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ, ಪುತ್ತೂರಿನ ಸಬ್ ಇನ್ಸ್­ಪೆಕ್ಟರ್ ಶ್ರೀ ಅಜಯ್ ಕುಮಾರ್ ಡಿ. ಎನ್. ಮಾತನಾಡಿ, ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ದ್ರವ್ಯಗಳ ಕುರಿತು ಎಚ್ಚರಿಕೆ ವಹಿಸಬೇಕು ಎಂದು ಕೆಲವೊಂದು ಕಾನೂನುಗಳ ಕುರಿತು ತಿಳಿಸಿದರು.

ಕಾಲೇಜಿನ ಸಂಚಾಲಕರಾದ ಶ್ರೀ ವಿಜಯನಾರಾಯಣ ಕೆ. ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಡೈರಕ್ಟರ್ ಆಫ್ ಲೀಗಲ್ ಸ್ಟಡೀಸ್ ಡಾ. ಬಿ. ಕೆ. ರವೀಂದ್ರ, ಪ್ರಭಾರ ಪ್ರಾಂಶುಪಾಲರಾದ ಶ್ರೀ ರಾಜೇಂದ್ರ ಪ್ರಸಾದ್ ಎ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕುಮಾರ್ ಎಸ್. ಪ್ರಮಾಣ ವಚನ ಬೋದಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಾಶ್ವತ್ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಧನ್ಯ ಎಂ. ಕೆ. ವಂದಿಸಿದರು.

ಕಾರ್ಯಕ್ರಮಕ್ಕೆ ಮೊದಲು, ಅತಿಥಿಗಳನ್ನು, ಭಾರತದ ಸಾಂಸ್ಕೃತಿಕ ಶೈಲಿಯಲ್ಲಿ, ಆರತಿಯನ್ನು ಬೆಳಗಿ ಸ್ವಾಗತಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

Event Calendar

Mon
Tue
Wed
Thu
Fri
Sat
Sun
M
T
W
T
F
S
S
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
1
2
3
4
5
Highslide for Wordpress Plugin